ಇತ್ತೀಚಿನ ಸುದ್ದಿರಾಜ್ಯ
ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20 ಜನರಿಗೆ ಗಾಯ
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್ ಮೂಲದ ಮಿನರ್ ಬಿಸ್ವಾಸ್, ಶಾಹೀದ್ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.



