
ರೈತರು ಕೃಷಿ ಯೋಜನೆಯ ಸೌಲಭ್ಯ ಬಳಸಿಕೊಳ್ಳಲು ಬೆಳೆ ವಿಮೆ ಮಾಡಿಸಿಕೊಳ್ಳಲು ಸದಾವಕಾಶ
ರಾಜ್ಯ ಸರ್ಕಾರವು 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದ್ದು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿಯ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ.ರಾಗಿ ಬೆಳೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಸೂಚನೆ ಮಾಡಲಾಗಿದ್ದು ರೈತರು ವಿಮೆ ನೋಂದಾಯಿಸಿಕೊಳ್ಳಬಹುದಾಗಿದೆ.ಭತ್ತ ರಾಗಿ ತೊಗರಿ ಹುರಳಿ ಅಲಸಂದೆ ಟೊಮೆಟೊ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚನೆ ಮಾಡಲಾಗಿದ್ದು ರೈತರುನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
ಮುಂಗಾರು ಹಂಗಾಮಿಗೆ ಎಳ್ಳು ಪ್ರತಿ ಎಕರೆಗೆ 233 ಪ್ರೀಮಿಯ ಮತವನ್ನು ರೈತರು ಪಾವತಿಸಬೇಕಾಗಿದ್ದು ವಿಮೆ ಪ್ರಸ್ತಾವನೆ ಸಲ್ಲಿಸಲು ದಿನಾಂಕ 30/6/2025ಕೊನೆಯ ದಿನಾಂಕವಾಗಿರುತ್ತದೆ ಅಲಸಂದೆ ಬೆಳೆ ಪ್ರತಿ ಎಕರೆಗೆ 243 ಮೊತ್ತವನ್ನು ರೈತರು ಪಾವತಿಸಬೇಕಾಗಿದ್ದು ವಿಮೆ ಪ್ರಸ್ತಾವನೆ ಸಲ್ಲಿಸಲು 15/7/2025 ರಂದು ಕೊನೆ ದಿನಾಂಕವಾಗಿರುತ್ತದೆ ರಾಗಿ ಪ್ರತಿ ಎಕರೆಗೆ 344 ಪ್ರೀಮಿಯಂ ಮತವನ್ನು ರೈತರು ಪಾವತಿಸಬೇಕಾಗಿದ್ದು ವಿಮೆ ಪ್ರಸ್ತಾವನೆ ಸಲ್ಲಿಸಲು 16/8/2025ರಂದು ಕೊನೆಯ ದಿನಾಂಕವಾಗಿರುತ್ತದೆ .
ಪ್ರಧಾನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮಾರ್ಗಸೂಚಿ ಅನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆ ಅಡಿ ಒಳಪಡಿಸಲಾಗುವುದು ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆಪಡದೆ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಕ್ಕಿಂತ ಏಳು ದಿನಗಳ ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರ ರೈತರನ್ನು ಬೆಳೆವಿಮೆ ಯೋಜನೆಯಿಂದ ಕೈ ಬಿಡಲಾಗುವುದು.
ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆ ಐಚ್ಚಿಕವಾಗಿದ್ದು ಅಧಿಸೂಚನೆ ಸೂಚಿಸಲಾದ ಬೆಳೆಗಳಿಗೆ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲಾತಿಗಳಾದ ಪಹಣಿ ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಆಧಾರ್ ಸಂಖ್ಯೆ ವಿವರಗಳೊಂದಿಗೆ ಬ್ಯಾಂಕ್ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಬೆಳೆವಿಮೆ ನೊಂದಾಯಿಸಬಹುದಾಗಿದೆ.ಆಸಕ್ತ ರೈತರು ಈ ಬಗ್ಗೆ ಮಾಹಿತಿ ಪಡೆಯಲು ರೈತ ಸಂಪರ್ಕ ಕೇಂದ್ರಗಳು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್ ರವರು ತಿಳಿಸಿದ್ದಾರೆ



