ರಾಜ್ಯ
Trending

ಮೇ.20ರಂದು ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಹಾಗೂ ಸಮಾಜ ಸೇವಕ ಮಲ್ಲಿಕಾರ್ಜುನ ಅಭಿಮಾನಿ ಬಳಗದ ವತಿಯಿಂದ ಪ್ರತಿಭಾ ಪುರಸ್ಕಾರ…

ಪಟ್ಟಣದ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು,ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 95ರಷ್ಟು, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು, ಪದವಿ ಪರೀಕ್ಷೆಯಲ್ಲಿ ಶೇ.80ರಷ್ಟು ಫಲಿತಾಂಶ ಪಡೆದಿರುವ ವಿದ್ಯಾರ್ಥಿಗಳು, ಹಾಗೂ ಶೇ.100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರು ಸೇರಿದಂತೆ ಪದವಿ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಬಿಎಂ ಹಾಗೂ ಎಂಜಿನಿಯರಿಂಗ್ ಪದವಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ನಗಧು ಬಹುಮಾನ lದೊಂದಿಗೆ ಸನ್ಮಾನಿಸಿ ಗೌರವಿಸಲಾಗುವುದು.ಆರ್ಹ ವಿದ್ಯಾರ್ಥಿಗಳು ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯ ನಳಂದ ಕಾನ್ವೆಂಟ್ ಹತ್ತಿರದಲ್ಲಿರುವ ಟ್ರಸ್ಟ್ ಕಛೇರಿಗೆ ಮೇ.18ರ ಸಂಜೆ 05 ಗಂಟೆಯೊಳಗೆ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮಹೇಶ್ ಮನವಿ ಮಾಡಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ. ನಿರ್ಮಲಾನಂದನಾಥ ಸ್ವಾಮೀಜಿಗಳು ಸೇರಿದಂತೆ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಸಾಧಕರು, ಕೆಎಎಸ್, ಐ.ಎ.ಎಸ್, ಐಪಿಎಸ್ ಅಧಿಕಾರಿಗಳು ಹಾಗೂ ವಿವಿಧ ಉದ್ಯಮಿಗಳು ಸೇರಿದಂತೆ ವಿವಿಧ ಮಠಾ ಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಹೇಶ್ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿ ಯಲ್ಲಿ ಹಿರಿಯ ಪತ್ರಕರ್ತರಾದ ಹರಿಚರಣ ತಿಲಕ್, ಕೆ.ಆರ್.ನೀಲಕಂಠ,ಅಪ್ಪನಹಳ್ಳಿ ಅರುಣ,ಪುರ ಮಹದೇಶ್ವರ ಕ್ಷೇತ್ರದ ಶ್ರೀ ಬಸಪ್ಪ ಗುರುಗಳು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button