
ಮಳವಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ರಾಜರಾಜೇಶ್ವರಿ ಜ್ಞಾನವಿಕಾಸ ಕೇಂದ್ರ, ಸ್ಪಂದನ ಆಸ್ಪತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಳವಳ್ಳಿ ತಾಲ್ಲೂಕಿನ ದೊಡ್ಡಬೂವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಸಲಾಯಿತು.ಶಿಬಿರವನ್ನು ಗ್ರಾ.ಪಂ ಅಧ್ಯಕ್ಷ ಅಶೋಕ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರ ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಇದು ಹೀಗೆ ಮುಂದುವರಿಬೇಕು ಎಂದು ತಿಳಿಸಿದರು.
ಗ್ರಾಮದ 100ಕ್ಕೂ ಮಂದಿಗೆ ಬಿ.ಪಿ, ಶುಗರ್ , ಹೃದಯದ ಸಂಬಂಧಿತ ಕಾಯಿಲೆಗಳ ಪರೀಕ್ಷೆ, ಇಸಿಜಿ ಪರೀಕ್ಷೆ ಸೇರಿದಂತೆ ಹಲವು ತಪಾಸಣಾ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಎನ್. ಚಂದ್ರಶೇಖರ ಆಚಾರ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ಲೋಕೇಶ್, ಸಂಪನ್ಮೂಲ ವ್ಯಕ್ತಿ ಡಾ.ಚೇತನ, ಎಸ್ ಡಿ ಎಂಸಿ ಅಧ್ಯಕ್ಷ ಬಸವರಾಜು, ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತಕುಮಾರ್, ನಿವೃತ್ತ ಉಪಾಧ್ಯಯ ಮಹದೇವಪ್ಪ, ಬಿ ಆರ್ ಪಿ ಸೋಮಣ್ಣ, ರವಿ, ಪದ್ಮ, ದನಂಜಯ, ನಂದೀಶ್, ಮಹಾಲಕ್ಷ್ಮಿ, ಸೇರಿದಂತೆ ಹಲವರು ಇದ್ದರು.



