ಕ್ರೀಡೆ
Trending

MI vs DC ಪಂದ್ಯವನ್ನು ಸ್ಥಳಾಂತರಿಸುವಂತೆ ಮನವಿ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ (IPL 2025) 62ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಮೇ 21) ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಹೀಗಾಗಿ ಈ ಮ್ಯಾಚ್ ಅನ್ನು ಮುಂಬೈಯಿಂದ ಸ್ಥಳಾಂತರಿಸುವಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಬಿಸಿಸಿಐಗೆ ಮನವಿ ಮಾಡಿದ್ದಾರೆ.ಈ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ಹಂತಕ್ಕೇರಬಹುದು. ಒಂದು ವೇಳೆ ಇಂದಿನ ಪಂದ್ಯವು ಮಳೆಯಿಂದಾಗಿ ರದ್ದಾದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ಲೇಆಫ್ ಅವಕಾಶ ಕ್ಷೀಣಿಸಲಿದೆ.ಏಕೆಂದರೆ ಪಂದ್ಯವು ಮಳೆಗೆ ಆಹುತಿಯಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಮುಂಬೈ ಇಂಡಿಯನ್ಸ್ ತಂಡದ ಪಾಯಿಂಟ್ಸ್​ 15 ಕ್ಕೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಯಿಂಟ್ಸ್​ 14 ಆಗಲಿದೆ. ಇದರಿಂದ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೂ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವುದನ್ನು ಡೆಲ್ಲಿ ಪಡೆ ಎದುರು ನೋಡಬೇಕಾಗುತ್ತದೆ.ಒಂದು ವೇಳೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ, ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೆ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಇಂದಿನ ಪಂದ್ಯವು ರದ್ದಾಗುವುದು ಬೇಕಾಗಿಲ್ಲ. ಇದೇ ಕಾರಣದಿಂದಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಪಂದ್ಯವನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆ ಈ ಪಂದ್ಯವನ್ನು ಲಕ್ನೋನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇದೇ ರೀತಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಸಹ ಬೇರೆಡೆಗೆ ಸ್ಥಳಾಂತರಿಸುವಂತೆ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರು ಮನವಿ ಮಾಡಿದ್ದಾರೆ. ಹೀಗಾಗಿ ಇಂದಿನ ಪಂದ್ಯ ನಡೆಯಲಿದೆಯಾ ಅಥವಾ ಮುಂದೂಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Related Articles

Leave a Reply

Your email address will not be published. Required fields are marked *

Back to top button