ಸಿನಿಮಾ
Trending

ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್​ನಲ್ಲಿ ಅವಘಡ

ತೆಲುಗಿನ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ‘ದಿ ಇಂಡಿಯನ್ ಹೌಸ್’ ಸಿನಿಮಾ (The Indian House Movie) ಸೆಟ್​ನಲ್ಲಿ ಅವಘಡ ಸಂಭವಿಸಿದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡ ಹೊರತಾಗಿಯೂ ಈ ಅವಘಡ ಉಂಟಾಗಿದೆ. ಈ ಚಿತ್ರದ ನಿರ್ಮಾಣದಲ್ಲಿ ರಾಮ್ ಚರಣ್ ಅವರು ಕೂಡ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಶಾಕಿಂಗ್ ಎನಿಸಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಬರಬೇಕಿದೆ.ಶಂಶಾಬಾದ್​ನಲ್ಲಿ ‘ದಿ ಇಂಡಿಯನ್ ಹೌಸ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಶೂಟ್​ಗಾಗಿ ದೊಡ್ಡ ಟ್ಯಾಂಕರ್ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕರ್ ಏಕಾಏಕಿ ಒಡೆದಿದೆ. ನೀರನ ಒತ್ತಡದಿಂದ ಟ್ಯಾಂಕರ್ ಒಡೆದಿರಬಹುದು ಎಂದು ಊಹಿಸಲಾಗಿದೆ. ಘಟನೆಯಲ್ಲಿ ಸಹಾಯಕ ಕ್ಯಾಮೆರಾಮನ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಟ್ಯಾಂಕ್​ನಿಂದ ನೀರು ಏಕಾಏಕಿ ಬಂದಿದ್ದರಿಂದ ಸಾಕಷ್ಟು ತೊಂದರೆಗಳು ಉಂಟಾದವು. ಸೆಟ್ ಪೂರ್ತಿ ನಾಶವಾಗಿದೆ. ಸಹಾಯಕ ಕ್ಯಾಮೆರಾಮೆನ್​ ಜೊತೆಗೆ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ. ನಟ ನಿಖಿಲ್ ಕೂಡ ಸೆಟ್​ನಲ್ಲಿ ಇದ್ದರು. ಆದರೆ, ಅವರಿಗೆ ಯಾವುದೇ ತೊಂದರೆ ಆಗಿಲ್ಲ.‘ದಿ ಇಂಡಿಯನ್ ಹೌಸ್’ ಚಿತ್ರದ ಕಥೆ ಸ್ವಾತಂತ್ರ್ಯಪೂರ್ವ ವಿಚಾರವನ್ನು ಹೊಂದಿದೆ. ಲಂಡನ್​ನಲ್ಲಿ ಇದ್ದ ಇಂಡಿಯನ್ ಹೌಸ್​ನಲ್ಲಿ ನಡೆಯೋ ಲವ್​ ಸ್ಟೋರಿಯ ಬಗ್ಗೆಯೂ ಚಿತ್ರದಲ್ಲಿ ಹೇಳಲಾಗಿದೆ. ಈ ಸಿನಿಮಾಗೆ ರಾಮ್ ವಂಶಿ ಕೃಷ್ಣ ನಿರ್ದೇಶನ ಮಾಡಿದ್ದಾರೆ.  ಈ ಚಿತ್ರವನ್ನು ಅಭಿಷೇಕ್ ಅಗರ್​ವಾಲ್ ಹಾಗೂ ತೇಜ್ ನಾರಾಯಣ್ ಅಗರ್​ವಾಲ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ರಾಮ್ ಚರಣ್ ಕೂಡ ಕೈ ಜೋಡಿಸಿದ್ದಾರೆ ಎನ್ನಲಾಗಿದೆ.ಸಾಮಾನ್ಯವಾಗಿ ಸಿನಿಮಾ ಮಾಡುವಾಗ ಉಂಟಾಗುವ ಅವಘಡಗಳಿಂದ ಕೆಲವೊಮ್ಮೆ ಪ್ರಾಣ ಹಾನಿ ಆದ ಉದಾಹರಣೆಯೂ ಇದೆ. ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ಬೇಕು ಎಂಬ ಸೂಚನೆ ಇದ್ದರೂ ಕೆಲವು ನಿರ್ಲಕ್ಷ್ಯದಿಂದ ಈ ರೀತಿಯ ತೊಂದರೆ ಉಂಟಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button