ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಪ್ರಸಿದ್ಧ ಯಾತ್ರಾಸ್ಥಳವಾದ
ಇಲ್ಲಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವವು ಬಹಳ ವಿಜೃಂಭಣೆಯಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಾದಪ್ಪನ ರಥೋತ್ಸವ ನೆಡೆಯಿತು
ಮಹಾರಥೋತ್ಸವ: ಸೋಮವಾರ ಬೆಳಿಗ್ಗೆ 9.40 ರಿಂದ 10.10 ರ ವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವ ವಿಜೃಂಭಣೆಯಿಂದ ಜರುಗಿತು
ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರು ದೇವರ ಗುಡ್ಡರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು , ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.
ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಪುಟ್ಟ ಬಾಲೆಯರ ಬೆಲ್ಲದ ಆರತಿಯೊಂದಿಗೆ, ಮಂಗಳವಾದ್ಯಗಳ ಸಮೇತ, ತಾಳ ಮೇಳಗಳ ಜೊತೆಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಾಲಯದ ಹೊರ ಆವರಣದಲ್ಲಿ ಸಾವಿರಾರು ಸಂಖ್ಯಾ ದೇವರಗುಡ್ಡರ ಸಮ್ಮುಖದಲ್ಲಿ ತೇರು ಸಾಗಿತು.
ದೂರದ ಊರುಗಳಿಂದ ಬಂದಿದ್ದ ಭಕ್ತರು, ಉರುಳು ಸೇವೆ, ಮುಡಿ ಸೇವೆ, ಪಂಜಿನ ಸೇವೆ, ಕಡಲೆ ಸೇವೆ, ಫಲಹಾರ ಸೇವೆ ಇನ್ನಿತರ ಉತ್ಸವಗಳಲ್ಲಿ ಪಾಲ್ಗೊಂಡರು. ಹಲವು ಭಕ್ತರು ತಾವು ಬೆಳೆದ ವರ್ಷದ ಮೊದಲ ಬೆಳೆಯ ದವಸ ಧಾನ್ಯಗಳನ್ನು ಮಾದಪ್ಪನ ದಾಸೋಹಕ್ಕೆ ನೀಡಿ ಹರಕೆ ತೀರಿಸಿದರು.
ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಭಾನುವಾರವೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರದಲ್ಲಿ ನೆರೆದಿದ್ದರು. ಸೋಮವಾರ ಜಾತ್ರೆಯ ಕೊನೆಯ ದಿನವಾಗಿದ್ದು, ಇಂದು ಬೆಳಿಗ್ಗೆ ರಥೋತ್ಸವ ನಡೆಯಲಿದೆ. ರಾತ್ರಿ ಕೊಂಡೋತ್ಸವ ನಡೆಯುವುದರೊಂದಿಗೆ ಐದು ದಿನಗಳ ಜಾತ್ರೆ ನಡೆಯಿತು
ನಾಲ್ಕು ದಿನಗಳಿಂದ ದೇವಾಲಯಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನವನ್ನು ಪಡೆದಿದ್ದಾರೆ. ಭಾನುವಾರವೂ ಭಕ್ತರ ದಂಡು ದೊಡ್ಡ ಸಂಖ್ಯೆಯಲ್ಲೇ ಇತ್ತು.
ಕಳೆದ ಐದು ದಿನಗಳಿಂದ ಮಲೆ ಮಾದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದ್ದ ಭಕ್ತಾದಿಗಳು ಸೋಮವಾರ ರಥೋತ್ಸವ ಮುಗಿದ ಬಳಿಕ ತಮ್ಮ ಗ್ರಾಮಗಳಿಗೆ ಹಿಂದಿರುಗಿದರು. ಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾರದ ಹಿಂದೆ ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸಿ ಬೀಡು ಬಿಟ್ಟಿದ್ದರು. ಅಲ್ಲದೆ ಎರಡು ದಿನಗಳಿಂದ ವಾಹನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಸ್ಥಾನದ ರಂಗಮಂದಿರ ಹಾಗೂ ಇನ್ನಿತರ ವಸತಿಗೃಹಗಳಲ್ಲಿ ಹಾಗೂ ರಂಗಮಂದಿರ ಸಾರ್ವಜನಿಕ ಸ್ಥಳಗಳಲ್ಲಿ ವಾಸ್ತವ್ಯ ಹೂಡಿ ರಥೋತ್ಸವ ಮುಗಿದ ಬಳಿಕ ತಮ್ಮ ಗ್ರಾಮಗಳತ್ತ ಭಕ್ತಾಧಿಗಳು ತೆರಳಿದರು.



