ಇತ್ತೀಚಿನ ಸುದ್ದಿ

ಶಾಸಕ ಜಿಟಿ ದೇವೇಗೌಡ ಪತ್ನಿ ಲಲಿತಾ ಜಿಟಿ ದೇವೇಗೌಡ ವಿರುದ್ದ: FIR

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಪತ್ನಿ ಲಲಿತಾ ಜಿಟಿ ದೇವೇಗೌಡ ವಿರುದ್ದ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಟಿಡಿ ಪತ್ನಿ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಹರೀಶ್ ಗೌಡ ರವರ ತಾಯಿ ಲಲಿತಾ ಜಿಟಿ ದೇವೇಗೌಡ ರವರು ಹಣಸೂರಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾಮದಲ್ಲಿ ಏಪ್ರಿಲ್ 6 ರಂದು ನಡೆದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಹವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿಯಮಾನುಸಾರ ಚುನಾವಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಭಾಗವಹಿಸಿದ್ದರು.ಅಲ್ಲದೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಚುನಾವಣಾ ಘೋಷಣೆ ಕೂಗಿದ್ದರು.ಇದನ್ನ ಪರಿಶೀಲಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ ಸುಬ್ರಹ್ಮಣ್ಯ ರವರು ಕ್ರಮ ಕೈಗೊಳ್ಳುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ…

Related Articles

Leave a Reply

Your email address will not be published. Required fields are marked *

Back to top button