
ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಯೋಜನೆಯ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮೋನಾರೋತ್ ರವರು ತಿಳಿಸಿದರು ತಾಲ್ಲೂಕಿನ ಮಲೆಯೂರು ಗ್ರಾಮದ ಕನಕಗಿರಿ ಭವನದಲ್ಲಿಂದು ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ಭೇರ್ ಪುಟ್ ಟೆಕ್ನಿಷಿಯನ್ ಹಾಗೂ ಗ್ರಾಮ ಕಾಯಕ ಮಿತ್ರ ಸಂಘದ ಸಹಯೋಗದಲ್ಲಿ ಆಯೋಜಿಸಿದ ನರೇಗಾ ದಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನರೇಗಾ ಯೋಜನೆಯಡಿ ಶಾಲಾಭಿವೃದ್ಧಿ ಕಾಮಗಾರಿಗಳಾದ ಶಾಲಾ ಶೌಚಾಲಯ, ಕಾಂಪೌಂಡ್, ಆಟದ ಮೈದಾನ,ಮಳೆ ನೀರು ಕೊಯ್ಲು ಘಟಕ, ಪೌಷ್ಟಿಕ ತೋಟ ಹಾಗೂ ಇತರೆ ಅನೇಕ ಕಾಮಗಾರಿಗಳನ್ನು ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಮೋನಾರೋತ್ ರವರು ತಿಳಿಸಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ 25.28 ಲಕ್ಷ ಮಾನವ ದಿನಗಳನ್ನು ಸೃಜನೆಮಾಡಿ 101.13 ರಷ್ಟು ಗುರಿಸಾಧನೆ ಮಾಡಿ, ನಿಗಧಿತ ಗುರಿಗಿಂತ ಹೆಚ್ಚಿನ ಪ್ರಗತಿ ಸಾಧಿಸಿ,11.276 ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ 64.640 ಕುಟುಂಬಗಳಿಗೆ ಉದ್ಯೋಗ ನೀಡಿ 1.04.764 ಕಾರ್ಮಿಕರಿಗೆ ಯೋಜನೆಯಡಿ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಸಾಧಿಸಿರುವ ಪ್ರಗತಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಅತ್ಯಧಿಕ ಪರಿಶಿಷ್ಟರಿಗೆ ಉದ್ಯೋಗ ನೀಡಿದ ಹಿರಿಮೆ ಜೆಲ್ಲೆಗೆ ಇದ್ದು 29.7 ರಷ್ಟು ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳು ಭಾಗವಹಿಸುವಿಕೆ ಮತ್ತು 8.97 ರಷ್ಟು ಪರಿಶಿಷ್ಟ ಪಂಗಡದ ಕಾರ್ಮಿಕರ ಭಾಗವಹಿಸುವಿಕೆಯಲ್ಲಿ 13ನೇ ಸ್ಥಾನ ಹಾಗೂ 56.67 ಮಹಿಳಾ ಕಾರ್ಮಿಕರ ಭಾಗವಹಿಸುವಿಕೆಯಲ್ಲಿ 4ನೇ ಸ್ಥಾನ ಪಡೆದಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ನಿಗಧಿತ ಗುರಿಯ ಪ್ರಗತಿ ಸಾಧಿಸಲು ಐ.ಇ.ಸಿ ಚಟುವಟಿಕೆಗಳ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಲು ಐ.ಇ.ಸಿ ವೇಳಾ ಪಟ್ಟಿ ಸಿದ್ದಪಡಿಸಿ ಮನೆ ಮನೆ ಬೇಟಿ, ಕಾರ್ಮಿಕರಿಗೆ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿತಿಳಿಸಿದ.ರು ಚಟುವಟಿಕೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮೀಣಾ ಭಾಗದ ಜನರಿಗೆ ಯೋಜನೆಯಡಿ ಹೆಚ್ಚು ಉದ್ಯೋಗ ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿ.ಇ.ಓ ಮೋನಾರೋತ್ ರವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ರವರು ಮಾತನಾಡಿ ನರೇಗಾ ಯೋಜನೆಯಡಿ ನರೇಗಾ ಯೋಜನೆಯಡಿ ಏಪ್ರಿಲ್ 1 ರಿಂದ 349ರೂ ಗಳಿಂದ 349ರೂಗೆ ಕೂಲಿ ಹೆಚ್ಚಾಳವಾಗಿರುವುದರಿಂದ ಪ್ರತಿಯೊಂದು ಕುಟುಂಬವು 100 ದಿನಗಳ ಕೂಲಿ ಪಡೆಯಬೇಕು ಎಂದು ತಿಳಿದರು.
ಇದೇ ಸಂದರ್ಭದಲ್ಲಿ ನರೇಗಾ ನೌಕರರ ಸಂಘದ ದಿಂದ ಮಲೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25 ನೇ ಸಾಲಿನಲ್ಲಿ 100 ದಿನ ಕೂಲಿ ಪೂರೈಸಿದ, ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು ಹಾಗೂ ಮಲೆಯೂರು ಗ್ರಾಮದ ಸರ್ಕಾರಿ ಶಾಲೆ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರದ ಮಕ್ಕಳಿಗೆ ಆಟಿಕೆ ಸಾಮಾಗ್ರಿ, ಕೂಲಿ ಕಾರ್ಮಿಕರಿಗೆ ಸಲಕರಣೆಗಳನ್ನು ವಿತರಿಸಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು.
ಈ ವೇಳೆ 2024-25 ನೇ ಸಾಲಿನಲ್ಲಿ ತೆರಿಗೆ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಭಿನಂದನ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಹಾಲಕ್ಷ್ಮಿ, ಉಪಾಧ್ಯಕ್ಷರು, ಸದಸರು, ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ಬಸವರಾಜು.ಸಿ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ರವೀಂದ್ರ,ಗೋಪಾಲಕೃಷ್ಣ, ಪ್ರಕಾಶ್, ನಾಗಭೂಷಣ್, ಜಿಲ್ಲಾ ಪಿ.ಡಿ.ಓ ಸಂಘದ ಅಧ್ಯಕ್ಷರಾದ ಕುಮಾರಸ್ವಾಮಿ, ಮಲೆಯೂರು ಗ್ರಾಮ ಪಂಚಾಯಿತಿ ಪಿ.ಡಿ.ಓ ಶೃತಿ ಹಾಗೂ ನರೇಗಾ ನೌಕರರ ಸಂಘದ ಅಧ್ಯಕ್ಷರಾದ ನವೀನ್ ಕುಮಾರ್, ಜಿಲ್ಲಾ ಪಂಚಾಯತಿ ಹರೀಶ್ ಉಪಸ್ಥಿತರಿದ್ದರು.



