
ಎಲ್ಲಾ ಕಾಲದಲ್ಲಿಯೂ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸರ್ಕಾರದ ಪ್ರಮುಖ ಧ್ಯೇಯವಾಗಿದೆ.ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿರುತ್ತದೆ. ಮೀಸಲಾತಿಯ ಪ್ರಯೋಜನವು ಎಲ್ಲಾ ಜಾತಿಗಳಿಗೆ ಸಮಾನವಾಗಿ ತಲುಪುವಂತೆ ಮಾಡಲು ಪರಿಶಿಷ್ಟ ಜಾತಿಗಳ ವರ್ಗಿಕರಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆಯಿರುತ್ತದೆ.ಮಾನ್ಯ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಗಳ ಒಳ ವರ್ಗಿಕರಣ ಮಾಡಬಹುದಾಗಿದೆ ಎಂದು State of Punjab and Others v/s Devinder Singh and Others ಪ್ರಕರಣದಲ್ಲಿ ದಿನಾಂಕ:01-08-2024 ರಂದು ತೀರ್ಪು ನೀಡಿರುತ್ತದೆ.ಅದರಂತೆ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಪ್ರಾತಿನಿಧ್ಯತೆ ಕುರಿತು Emperical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ (ಉಪ ವರ್ಗೀಕರಣ) ಬಗ್ಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್. ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ಸರ್ಕಾರವು ರಚಿಸಿದೆ.
ಈ ನಿಟ್ಟಿನಲ್ಲಿ ಸರ್ಕಾರವು 2024ನೇ ಡಿಸೆಂಬರ್ 13ರಂದು ಸೂಕ್ತ ನಿಯಮ ಹಾಗೂ ಮಾರ್ಗಸೂಚಿಗಳನ್ನು ಸಹ ನಿಗದಿಪಡಿಸಿ ಆದೇಶ ಹೊರಡಿಸಲಾಗಿರುತ್ತದೆ.ಕರ್ನಾಟಕ ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿಯನ್ನು ಪರಿಗಣಿಸಿ, ವೈಜ್ಞಾನಿಕವಾಗಿ ತರ್ಕಬದ್ಧ ಒಳ ಮೀಸಲಾತಿ (ಉಪ-ವರ್ಗೀಕರಣ) ಮತ್ತು ಪರಿಶಿಷ್ಟ ಜಾತಿಗಳಲ್ಲಿ ಸಮಾನ ಜಾತೀಯ (Homogeneous) ಉಪ-ಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸುವ ಬಗ್ಗೆ ಪರಿಶೀಲಿಸುವುದು.ರಾಜ್ಯದ ಸಾರ್ವಜನಿಕ ಸೇವೆಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಗಳಲ್ಲಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯದಲ್ಲಿನ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಅಂತರ್ ಹಿಂದುಳಿದಿರುವಿಕೆಯನ್ನು (Inter-se backwardness) ಗುರುತಿಸಲು Empirical data ಸಂಗ್ರಹಿಸುವುದು.
ಕರ್ನಾಟಕ ರಾಜ್ಯದಲ್ಲಿನ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳಲ್ಲಿ ಅಂತರ್ಹಿಂದುಳಿದಿರುವಿಕೆ (Inter-se backwardness) ಹಾಗೂ ಪ್ರಾತಿನಿಧ್ಯತೆಯ ಆಧಾರದ ಮೇಲೆ ಸೂಕ್ತ ಒಳ ಮೀಸಲಾತಿ (ಉಪ-ವರ್ಗೀಕರಣ) ಮಾಡುವ ಬಗ್ಗೆ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಮೀಸಲಾತಿ ಪ್ರಮಾಣವನ್ನು ನಿಗದಿಪಡಿಸುವ ಬಗ್ಗೆ ಪರಿಶೀಲಿಸುವುದು.ಆಯೋಗವು ಅಗತ್ಯವಿದ್ದಲ್ಲಿ ತನ್ನ ವಿವೇಚನೆಯಂತೆ ಮತ್ತು ಅಂತರ್ಹಿಂದುಳಿದಿರುವಿಕೆಯ ಬಗ್ಗೆ ಇನ್ನಿತರ ಸೂಕ್ತ ದತ್ತಾಂಶಗಳು (Empirical data) ಲಭ್ಯವಿದ್ದಲ್ಲಿ ಸಂಗ್ರಹಿಸಬಹುದು.
ಪರಿಶಿಷ್ಟ ಜಾತಿಯೊಳಗಿನ ವಿವಿಧ ಉಪ ಗುಂಪುಗಳ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ವಿವಿಧ ಸಮಸ್ಯೆಗಳನ್ನು ಪರಿಶೀಲಿಸುವ ಬಗ್ಗೆ ಮತ್ತು ಮಾನ್ಯ ಸರ್ವೋಚ್ಛ ನ್ಯಾಯಾಲಯವು (ಪಂಜಾಬ್ ರಾಜ್ಯ ಮತ್ತು ಇತರರ ವಿರುದ್ಧ ದೇವಿಂದರ್ ಸಿಂಗ್ ಮತ್ತು ಇತರರು ಸಿವಿಲ್ ಮೇಲ್ಮನವಿ ಸಂಖ್ಯೆ: 2317/2011ರ ದಿನಾಂಕ:01-08-2024ರ ಪ್ರಕರಣದಲ್ಲಿ) ನೀಡಿರುವ ತೀರ್ಪಿನ ಅನ್ವಯ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ (ಉಪ-ವರ್ಗೀಕರಣ) ಬಗ್ಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ವಿಧಾನ ಬಗ್ಗೆ ಪರಿಶೀಲಿಸುವುದು.
ಮೀಸಲಾತಿ ನೀತಿಗಳ ಪ್ರಯೋಜನವನ್ನು ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳ ನಡುವೆ ಸಮಾನವಾಗಿ ಪಡೆಯಲಾಗುತ್ತಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವುದು ಮತ್ತು ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಕೈಗೊಳ್ಳಬಹುದಾದ ಇತರ ಕ್ರಮಗಳ ಕುರಿತು ನಿರ್ದಿಷ್ಟ ಶಿಫಾರಸ್ಸುಗಳೊಂದಿಗೆ ವರದಿಯನ್ನು ಸಲ್ಲಿಸುವುದು.ದಿನಾಂಕ: 04-01-2025 ರಿಂದ 26-03-2025 ರವರೆಗೂ ಒಳಮೀಸಲಾತಿಯ ಬಗ್ಗೆ ಒಟ್ಟು 4034 ಅಹವಾಲುಗಳು/ಮನವಿಗಳ (ಇ-ಮೇಲ್/ಮುದ್ದಾಂ/ಅಂಚೆ ಮೂಲಕ) ಹಾಗೂ ಸಲಹೆಗಳನ್ನು ಆಯೋಗವು ಸ್ವೀಕರಿಸಿದ್ದು, ಸದರಿ ಮನವಿ/ ಅಹವಾಲುಗಳನ್ನು ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಗೌರವಾನ್ವಿತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗವು ದಿನಾಂಕ: 27-03-2025 ರಂದು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಣೆಗೆ ಸಮೀಕ್ಷೆಯನ್ನು ನಡೆಸಲು ಶಿಫಾರಸ್ಸು ಮಾಡಿರುತ್ತದೆ. ಅದರಂತೆ ವೈಜ್ಞಾನಿಕ ದತ್ತಾಂಶ ಸಂಗ್ರಹಣೆಗೆ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿರುತ್ತದೆ.
2011ರ ಜನಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿರುವ ಜಾತಿಗಳ ಮೂಲಜಾತಿಗಳ ಸಂಖ್ಯೆಯ ಮಾಹಿತಿ ಇಲ್ಲದೆ ಇರುವುದರಿಂದ ಮಾದಿಗ ಸಂಬಂಧಿತ ಜಾತಿಗಳ ಸಂಖ್ಯೆ ಮತ್ತು ಹೊಲೆಯ ಸಂಬಂಧಿತ ಜಾತಿಗಳ ಸಂಖ್ಯೆಯನ್ನು ವರ್ಗೀಕರಿಸಲು ಸಾಧ್ಯವಾಗಿರುವುದಿಲ್ಲ.ಪರಿಶಿಷ್ಟ ಜಾತಿಗಳ ಬಗ್ಗೆ ನಮೂದಿಸಿರುವ ಜನಸಂಖ್ಯೆಯನ್ನು ಒಳಮೀಸಲಾತಿಯ ವರ್ಗೀಕರಣದಲ್ಲಿ ಯಾವ ಗುಂಪಿಗೆ ಸೇರಿಸಬೇಕು ಎಂಬುವದರ ಬಗ್ಗೆ ಯಾವ ವರದಿಯಲ್ಲೂ ಉಲ್ಲೇಖವಿಲ್ಲ ಮತ್ತು ಈ ಸಮುದಾಯವನ್ನು ವರ್ಗೀಕರಣದಲ್ಲಿ ಪರಿಗಣಿಸಿಲ್ಲ. 2011ರ ಜನಗಣತಿಯಲ್ಲಿ ಇವರ ಉಪಜಾತಿಗಳ ವಿವರಗಳು ಲಭ್ಯವಿಲ್ಲ ಆದ್ದರಿ…


